ಮಹನೀಯರ ಕಂಚಿನ ಪುತ್ಥಳಿ ನಿರ್ಮಾಣ

HB Halli Valmiki Jayanti
ಹಗರಿಬೊಮ್ಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.
Published on

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಅವರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಭರವಸೆ ನೀಡಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ವಾಲ್ಮೀಕಿ ಮಹಾಸಭಾ ಹಮ್ಮಿಕೊಂಡಿದ್ದ, ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದರಂತೆ ಡಾ.ಅಂಬೇಡ್ಕರ್, ಕನಕದಾಸರ ಕಂಚಿನ ಪುತ್ಥಳಿಗಳನ್ನು ಸಹ ನಿರ್ಮಿಸಲಾಗುವುದು. ಎಸ್ಸಿ-ಎಸ್ಟಿ ಅಭಿವೃದ್ಧಿ ಕಚೇರಿಯನ್ನು ಪ್ರತ್ಯೇಕವಾಗಿ ತೆರೆಯಬೇಕು ಎಂದು ಸದನದಲ್ಲಿ ಪ್ರಸ್ತಾಪಿಸುವೆ. ಸರ್ಕಾರದ ಸೌಲಭ್ಯಗಳ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಪುರಸಭೆ ಅಧ್ಯಕ್ಷ ಮರಿರಾಮಪ್ಪ, ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷ ಟಿ.ವೆಂಕೋಬಪ್ಪ, ಮಂಜುನಾಥ ಬೇವಿನಕಟ್ಟಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಪುರಸಭೆ ಉಪಾಧ್ಯಕ್ಷೆ ಅಂಬಿಕಾ ದೇವೇಂದ್ರ, ಸದಸ್ಯ ಜೋಗಿ ಹನುಮಂತ, ಮಾಜಿ ಅಧ್ಯಕ್ಷ ಟಿ.ರಾಘವೇಂದ್ರ, ತಂಬ್ರಹಳ್ಳಿ ಗ್ರಾಪಂ ಅಧ್ಯಕ್ಷೆ ಏಣಿಗಿ ಪೂರ್ಣಿಮಾ ಹನುಮೇಶ, ಪ್ರಮುಖರಾದ ರೋಗಾಣಿ ಹುಲುಗಪ್ಪ, ಬಸವರಾಜ ರೆಡ್ಡಿ, ಕಹಳೆ ಬಸವರಾಜ್, ಬಡಿಗೇರ್ ಬಸವರಾಜ್, ಗದ್ದಿಕೆರೆ ದೊಡ್ಡಬಸಪ್ಪ, ಹಂಪಸಾಗರ ಕೊಟ್ರೇಶಪ್ಪ, ಮಲ್ಲೇಶಪ್ಪ, ಹೊನ್ನೂರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net