ಜು.6ರಂದು ಜಾರ್ಜ್ ಫೆರ್ನಾಂಡಿಸ್ ರಸ್ತೆ ಉದ್ಘಾಟನೆ

mcms
Published on


ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಸರ್ಕಿಟ್ ಹೌಸ್ ಬಳಿಯಿಂದ ಬಿಜೈ ವೃತ್ತದವರೆಗಿನ ರಸ್ತೆಗೆ ಮಾಜಿ ಕೇಂದ್ರ ಸಚಿವ ಜಾರ್ಜ್ ೆರ್ನಾಂಡಿಸ್ ಅವರ ಹೆಸರಿಡಲು ಸರ್ಕಾರ ಅನುಮೋದನೆ ನೀಡಿದ್ದು, ಜು.6ರಂದು ಸಾಯಂಕಾಲ 4ಕ್ಕೆ ಬಿಜೈ ವೃತ್ತದ ಬಳಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಸಹಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಬಿಜೈ ಚರ್ಚ್‌ನ ಧರ್ಮಗುರು ಾ.ಜೆ.ಬಿ.ಸಲ್ಡಾನ್ಹಾ ಆಶೀರ್ವಚನ ನೀಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಜಾರ್ಜ್ ೆನಾಂಡಿಸ್ ಅವರ ಸಹೋದರ ಮೈಕಲ್ ೆರ್ನಾಂಡಿಸ್ ಭಾಗವಹಿಸುವರು ಎಂದರು.
ಕಾರ್ಮಿಕರ ಧ್ವನಿಯಾಗಿದ್ದ ಜಾರ್ಜ್ ೆರ್ನಾಂಡಿಸ್ ಅವರ ಹೆಸರನ್ನು ಬಿಜೈ ರಸ್ತೆಗೆ ಇಡುವ ಕುರಿತಂತೆ ಪ್ರೇಮಾನಂದ ಶೆಟ್ಟಿ ಅವರು ಮೇಯರ್ ಆಗಿದ್ದಾಗ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಬಳಿಕ ಪಾಲಿಕೆ ಅನುಮೋದನೆಯೊಂದಿಗೆ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಈಗ
ಸರ್ಕಾರದ ಒಪ್ಪಿಗೆ ದೊರೆತಿದೆ . ಫೆರ್ನಾಂಡಿಸ್ ಅವರು ಬಿಜೈ ನಿವಾಸಿಯಾಗಿದ್ದ ಕಾರಣ ಅಲ್ಲಿನ ರಸ್ತೆಗೆ ಹೆಸರಿಡಲು ತೀರ್ಮಾನ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಮೇಯರ್ ಸುನೀತಾ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್, ಗಣೇಶ್ ಕುಲಾಲ್, ಲೋಹಿತ್ ಅಮೀನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net