ಕೊಪ್ಪಳ : ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುಚ್ಛಕ್ತಿ ಗ್ರಾಹಕರ ವಿದ್ಯುತ್‌ಶಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಕುಂದು ಕೊರತೆಗಳನ್ನು ಪರಿಹರಿಸಲು ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ.
ಕೊಪ್ಪಳದ ಕಾರ್ಯ ಮತ್ತು ಪಾಲನಾ ವಿಭಾಗದ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಗೆ ಸಂಬಂಧಿಸಿದ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಪಾಲ್ಗೊಂಡು ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.