ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

Untitled design (1)
ಕುರುಗೋಡು ಸಮೀಪದ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣಮೂರ್ತಿ, ಶಿಕ್ಷಕರಾದ ಎಸ್.ರಾಮು, ಪ್ರಮುಖರಾದ ಹನುಮಂತಪ್ಪ, ಮಾರುತಿ ಇದ್ದರು.
Published on

ಕುರುಗೋಡು: ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಬಸವನಗೌಡ ಹೇಳಿದರು.


ಸಮೀಪದ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಕನಿಷ್ಠ ಆರು ತಿಂಗಳಿಗೊಮ್ಮೆಯಾದರೂ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡಬೇಕು ಎಂದರು.


ಬಿಪಿ, ಶುಗರ್, ಮಲೇರಿಯಾ, ಡೆಂೆ ರೋಗಗಳ ತಪಾಸಣೆ ಮಾಡಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣಮೂರ್ತಿ, ಶಿಕ್ಷಕರಾದ ಎಸ್.ರಾಮು, ವೈ. ಧನಂಜಯ ರೆಡ್ಡಿ, ಪ್ರಮುಖರಾದ ಹನುಮಂತಪ್ಪ, ಮಾರುತಿ, ಆಶಾ ಕಾರ್ಯಕರ್ತೆ ಕನ್ಯಾಕುಮಾರಿ, ಇಂದ್ರಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net