ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿ

ದೇವದುರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಯರೋಗ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ವೈದ್ಯಾಧಿಕಾರಿ ಶಿವಕುಮಾರ, ಯಶೋದಾ, ಆಯುಷ್ ವೈದ್ಯರಾದ ನಿರ್ಮಲಾ, ವಿಮಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಗೀತಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸಯ್ಯ ಸ್ವಾಮಿ, ನಂದಕುಮಾರ ಇತರರಿದ್ದರು.

Published on

ದೇವದುರ್ಗ: ಕಲುಷಿತ ವಾತಾರಣದಲ್ಲಿ ಆರೋಗ್ಯವಾಗಿರುವುದು ಕಷ್ಟ. ಹೀಗಾಗಿ ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿ ವೈದ್ಯರ ಸಲಹೆಗಳನ್ನು ಪಾಲಿಸಬೇಕು ಎಂದು ಕ್ಷಯರೋಗ ಮೇಲ್ವಿಚಾರಕ ರವಿಶುಕ್ಲ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯರೋಗ ಮೇಲ್ವಿಚಾರಣೆ ವಿಭಾಗದಿಂದ ಗುರುವಾರ ಹಮ್ಮಿಕೊಂಡಿದ್ದ ಕ್ಷಯರೋಗ ಹಾಗೂ ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ವಿವಿಧ ಅಭಿಯಾನ ಹಾಗೂ ಯೋಜನೆಗಳನ್ನು ಜಾರಿಗೊಳಿಸಿದೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆವೇಳೆ ಜ್ವರ, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು, ನಿದ್ರೆ ಬಾರದಿರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು ಈ ಲಕ್ಷಣಗಳು ಕಂಡುಬಂದರೆ ತಕ್ಷಣ ತಪಾಸಣೆ ಮಾಡಿಸಬೇಕು. ವೈದ್ಯರ ಸಲಹೆಗಳನ್ನು ಪಾಲಿಸಿ ಪೌಷ್ಟಿಕ ಆಹಾರ ಸೇವಿಸಬೇಕು. ಸರ್ಕಾರ ರೋಗ ನಿರ್ಮೂಲನೆಗೆ ಪೋಷಣಾ ಅಭಿಯಾನ ಕೈಗೊಂಡಿದ್ದು, ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಮಕ್ಕಳ ವೈದ್ಯಾಧಿಕಾರಿಗಳಾದ ಶಿವಕುಮಾರ, ಯಶೋದಾ, ಆಯುಷ್ ವೈದ್ಯರಾದ ನಿರ್ಮಲಾ, ವಿಮಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಗೀತಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸಯ್ಯ ಸ್ವಾಮಿ, ನಂದಕುಮಾರ, ವಿಶ್ವನಾಥ, ರವಿಕುಮಾರ, ಕ್ಷಯರೋಗ ಮೇಲ್ವಿಚಾರಕ ಭೀಮೇಶ್, ಆರೋಗ್ಯ ಮಿತ್ರ ಮಹೇಶಯ್ಯ, ಪ್ರಮುಖರಾದ ಪ್ರಭು, ಮುತ್ತಣ್ಣ, ರಾಜು ಪವಾರ, ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net