ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಗ್ರಾಪಂ ಅಧ್ಯಕ್ಷೆ ಶಿವಗಂಗಾ ಪಂಪಾಪತಿ ಚಾಲನೆ ನೀಡಿದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶರಣಪ್ಪ ಚಕೋತಿ, ಆಯುಷ್ ವೈದ್ಯಾಧಿಕಾರಿ ಸ್ಮಿತಾ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ರೇಖಾ, ಫಾರ್ಮಸಿ ಅಧಿಕಾರಿ ಶಿಲ್ಪಾಶ್ರೀ, ಶುಶ್ರೂಷ ಅಧಿಕಾರಿ ಸಾಬೇರಾ ಬೇಗಂ ಇತರರಿದ್ದರು.

Published on

ಸಿದ್ದಾಪುರ: ಜೀವನದಲ್ಲಿ ಆರೋಗ್ಯ ಮುಖ್ಯವಾಗಿದ್ದು, ಎಲ್ಲರೂ ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಗ್ರಾಪಂ ಅಧ್ಯಕ್ಷೆ ಶಿವಗಂಗಾ ಪಂಪಾಪತಿ ಹೇಳಿದರು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಲ್ಲಿ ಮಾತನಾಡಿದರು. ಮಹಿಳೆಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆ. ಆರೋಗ್ಯ ಸೇವೆಯಲ್ಲಿ ಉತ್ತಮ ಗುಣಮಟ್ಟವನ್ನು ಖಚಿತಪಡಿಸುವುದು, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಸಾರ್ವಜನಿಕರು ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶರಣಪ್ಪ ಚಕೋತಿ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ಮಹಿಳೆಯರು ಗಮನ ಹರಿಸಬೇಕು. ಮಕ್ಕಳು ಕಿರಿಕಿರಿ ಮಾಡಿದರೆ ಅಥವಾ ಇತರ ಸಮಸ್ಯೆಗಳಿದ್ದರೆ ತಕ್ಷಣ ವೈದ್ಯರ ಬಳಿ ತಪಾಸಣೆ ಮಾಡಿಸಿ. ಮಳೆಗಾಲ ಇರುವುದರಿಂದ ಶೀತ, ಜ್ವರ, ಕೆಮ್ಮು ಹರಡುತ್ತಿದ್ದು, ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ ಎಂದು ಸಲಹೆ ನೀಡಿದರು.

ಆಯುಷ್ ವೈದ್ಯಾಧಿಕಾರಿ ಸ್ಮಿತಾ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ರೇಖಾ, ಫಾರ್ಮಸಿ ಅಧಿಕಾರಿ ಶಿಲ್ಪಾಶ್ರೀ, ಶುಶ್ರೂಷ ಅಧಿಕಾರಿ ಸಾಬೇರಾ ಬೇಗಂ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವಣ್ಣಯ್ಯ, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net