ಸೌಲಭ್ಯ ಪಡೆದು ಮಕ್ಕಳ ಭವಿಷ್ಯ ರೂಪಿಸಿ

001 (1)
ಮಾದೀಹಳ್ಳಿ ಹೋಬಳಿ ಹುಲುಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವವನ್ನು ರಾಜೇಗೌಡ ಉದ್ಘಾಟಿಸಿದರು. ಮಂಜೇಗೌಡ, ಶಿವಮರಿಯಪ್ಪ, ಗೋಪಾಲ್, ಮಲ್ಲಿಕಾರ್ಜುನ ಇದ್ದರು.
Published on

ಹಗರೆ : ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸರ್ಕಾರ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದು, ಅವುಗಳ ಉಪಯೋಗ ಪಡೆದುಕೊಂಡು ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ತಿಳಿಸಿದರು.

ಮಾದೀಹಳ್ಳಿ ಹೋಬಳಿ ಹುಲುಗುಂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೂ ಸಹ ವಾರ್ಷಿಕೋತ್ಸವ ಮಾಡುವಂತೆ ಸೂಚನೆ ನೀಡಲಾಗುವುದು. ಆಗ ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ವೇದಿಕೆ ದೊರೆಯುತ್ತದೆ ಎಂದರು.

ಶಾಲೆಯ ಮುಖ್ಯಶಿಕ್ಷಕ ಮಂಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಆಣತಿಯಂತೆ ಹಾಗೂ ಆಶಯದಂತೆ ಇಂದು ಶಾಲಾ ವಾರ್ಷಿಕೋತ್ಸವ ಮಾಡುತ್ತಿದ್ದು, ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ನಿಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದೆ ಸರ್ಕಾರಿ ಶಾಲೆಗೆ ಸೇರಿಸಿ. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಾಲಕರು ಈ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವಮರಿಯಪ್ಪ, ಶಿಕ್ಷಣ ಸಂಯೋಜಕ ಗೋಪಾಲ್, ಸಮೂಹ ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ, ಎಸ್‌ಡಿಎಂಸಿ ಅಧ್ಯಕ್ಷ ಅರುಣ್, ಶಾಲಾ ಶಿಕ್ಷಕಿ ಬಾನುಮತಿ, ಅತಿಥಿ ಶಿಕ್ಷಕರಾದ ನಯನಾ, ಮಾಸಾಬಿ ಎಸ್. ಪಾಟೀಲ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್, ಹಿರಿಯ ಮುಖಂಡ, ಪ್ರೌಢಶಾಲಾ ಶಿಕ್ಷಕ ಲಕ್ಷ್ಮೀಕಾಂತ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net