ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಪಡೆಯಿರಿ

Untitled-1
ಸೂಲಿಬೆಲೆ ಹೋಬಳಿ ಬೆಂಡಿಗಾನಹಳ್ಳಿ ಸರ್ಕಾರಿ ಶಾಲೆ ಎಸ್​ಎಸ್​ಎಲ್​ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಜಿ.ಎಂ.ಮೋಹನ್​ ಹಾಗೂ ಪ್ರೇಮಲತಾ ಅವರಿಗೆ ಬೆಂಡಿಗಾನಹಳ್ಳಿಯಲ್ಲಿರುವ ಶಾಸಕ ಶರತ್​ ಬಚ್ಚೇಗೌಡರ ನಿವಾಸದಲ್ಲಿ ಸನ್ಮಾನ ಮಾಡಲಾಯಿತು. ಬಿಡಿಸಿಸಿ ಬ್ಯಾಂಕ್​ ನಿರ್ದೇಶಕ ಬಿ.ವಿ.ಸತೀಶಗೌಡ, ನಾಗರಾಜಪ್ಪ, ಹಸಿಗಾಳ ಜಗದೀಶ್​, ಪ್ರಾಂಶುಪಾಲ ಬಸವರಾಜ್​ ಇದ್ದರು.
Published on

ಸೂಲಿಬೆಲೆ : ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಸರ್ಕಾರಿ ಶಾಲೆಗಳಲ್ಲೇ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಶರತ್​ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಹೋಬಳಿ ಬೆಂಡಿಗಾನಹಳ್ಳಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಸೂಲಿಬೆಲೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಜಿ.ಎಂ.ಮೋಹನ್​ 623 ಅಂಕ, ಗುಳ್ಳಹಳ್ಳಿಯ ಪ್ರೇಮಲತಾ 577 ಅಂಕ ಪಡೆದು ಜಿಲ್ಲೆಗೆ ಗೌರವ ತಂದಿದ್ದಾರೆ ಎಂದರು.

ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಭವಿಷ್ಯದ ದೃಷ್ಟಿಕೋನದಲ್ಲಿ ಉತ್ತಮವಾದ ವಿಷಯ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಸಲಹೆ ನೀಡಿದರು.ಬಿಡಿಸಿಸಿ ಬ್ಯಾಂಕ್​ ನಿರ್ದೇಶಕ ಬಿ.ವಿ.ಸತೀಶಗೌಡ ಮಾತನಾಡಿ, ವಿದ್ಯೆ ಸಾಧಕರ ಸ್ವತ್ತೇ ಹೊರತು ಸೋಮಾರಿಯದ್ದಲ್ಲ. ಕಠಿಣ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯ ಎಂದರು. ಮುರಾಜಿ ದೇಸಾಯಿ ವಸತಿ ಶಾಲ ಪ್ರಾಂಶುಪಾಲ ಬಸವರಾಜ್​, ತಾಪಂ ಮಾಜಿ ಸದಸ್ಯ ನಗರೇನಹಳ್ಳಿ ನಾಗರಾಜಪ್ಪ, ವಿದ್ಯಾರ್ಥಿಗಳ ಪೋಷಕರಾದ ವೆಂಕಟೇಶ್​, ಮುನಿನಾರಾಯಣಪ್ಪ, ಯುವ ಮುಖಂಡ ಹಸಿಗಾಳ ಜಗದೀಶ್​, ಸಹ ಶಿಕ್ಷಕರಾದ ರುತ್​ಜೆಸಂತಾ, ರತಾ,ಬಸವರಾಜ್​ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net