

ಅರಕಲಗೂಡು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ತರಬೇತಿ ಪಡೆದುಕೊಳ್ಳುವುದು ಸೂಕ್ತ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು.
ತಾಲೂಕಿನ ಕೊಣನೂರು ಬಿ.ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಗದರ್ಶಿ ಶೀರ್ಷಿಕೆಯಡಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದವರೊಂದಿಗೆ ಪೈಪೋಟಿ ಎದುರಿಸಲು ಇಂತಹ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಪ್ರತಿನಿತ್ಯ ಪಠ್ಯ ಪುಸ್ತಗಳ ಕಲಿಕೆ ಜತೆಗೆ ಸ್ಪರ್ಧಾತ್ಮಕ ಶಿಕ್ಷಣದ ಕಡೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಚೌಡೇಗೌಡ, ಪ್ರಾಂಶುಪಾಲ ರಾಜೀವ್, ಉಪನ್ಯಾಸಕರು ಇದ್ದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.