ಎಚ್‌ಡಿಕೆಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ! ; ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

kkkk
Published on

ರಾಮನಗರ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವೈಯುಕ್ತಿನ ನಿಂದನೆ ತಾರಕಕ್ಕೆ ಏರಿದ್ದು, ಮೈಸೂರಿನಲ್ಲಿ ಕುಮಾರಸ್ವಾಮಿ ಅವರ ದಾಳಿಗೆ ಪ್ರತಿದಾಳಿ ನಡೆಸಿರುವ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಕನಕಪುರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು. ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ವಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ. ಕೃಷ್ಣ್ಣ ಅವರ ನಡುವಣ ಸಂಬಂಧ ಏನು ಎಂದು ಕುವಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ ಎಂದರು.

ನಾನು ಯಾವ ಬಡವನ ಆಸ್ತಿ ಲೂಟಿ ವಾಡಿದ್ದೇನೆ. ಆತನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಲಿ. ಬಡವರಿಗೆ ತೊಂದರೆ ನೀಡಿ ಆಸ್ತಿ ಕಿತ್ತುಕೊಂಡಿರುವುದು ನಮ್ಮ ಜಾಯವಾನದಲ್ಲಿಲ್ಲ. ಕುವಾರಸ್ವಾಮಿ ಅವರ ಬಗ್ಗೆ ಯೋಗೇಶ್ವರ್ ಅವರೇ ಈಗಾಗಲೇ ವಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಶಿವಕುವಾರ್ ಅವರಿಗೆ ರಾಜಕೀಯಕ್ಕೆ ಬಂದ ಮೇಲೆ ಆಸ್ತಿ ಬಂದಿದೆ. ಅವರ ತಂದೆ ಏನಾಗಿದ್ದರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಬಡವರು, ಹೊಲ ಉಳುಮೆ ವಾಡಿಕೊಂಡಿದ್ದೆವು. ನಾನು ಬೆಂಗಳೂರಿನ ಎನ್‌ಪಿಎಸ್ ಶಾಲೆಯಲ್ಲಿ ಓದಿದವನು. ನನ್ನ ಇತಿಹಾಸ ಅಲ್ಲಿಂದ ಶುರುವಾಗಿದೆ ಎಂದರು.

ನನ್ನನ್ನು ಜೈಲಿಗೆ ಹಾಕಲು ಮೊದಲಿಂದಲೂ ದೊಡ್ಡ ಸಂಚು ನಡೆದುಕೊಂಡು ಬಂದಿದ್ದು, ಈಗಲೂ ಷಡ್ಯಂತ್ರ ವಾಡುತ್ತಿದ್ದಾರೆ. ಹೀಗಾಗಿ 10 ತಿಂಗಳಲ್ಲಿ ಸರ್ಕಾರ ತೆಗೆಯುವುದಾಗಿ ಹೇಳಿದ್ದಾರೆ ಎಂದ ಅವರು, ಶಿವಕುವಾರ್, ಕುಮಾರಸ್ವಾಮಿ ಮೇಲೆ ಯಾವ ರೀತಿ ಬಂಡೆ ಹಾಕಿದ್ದೇನೆ ಎಂದು ಅವರು, ಅವರ ಪಕ್ಷದ ನಾಯಕರು ಹೇಳಲಿ. ಅವರ ವಾತುಗಳನ್ನು ಕೇಳುತ್ತಿದ್ದರೆ, ಅವರಿಗೆ ಚಿಕಿತ್ಸೆ ಕೊಡಿಸುವುದು ಉತ್ತಮ ಎಂದರು.

ಸಿಎಂ ಸದನದಲ್ಲಿ ಉತ್ತರ ನೀಡದೇ ರಣಹೇಡಿಯಂತೆ ಕದ್ದು ಓಡಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ ಶಿವಕುಮಾರ್, ಹೇಡಿ ಯಾರು ಎಂಬುದನ್ನು ಸದನದಲ್ಲಿ ಬಂದು ವಾತನಾಡಲಿ ಎಂದು ತಿಳಿಸಿದರು.

ನನ್ನ ಮೇಲೆ ಕಣ್ಣಾಕಿದರೂ ಸರ್ವ ನಾಶವಾಗುತ್ತಾರೆ ಎಂದು ಹೇಳುವ ಮೂಲಕ ಕುವಾರಸ್ವಾಮಿ ಮೇಲೆ ಕಣ್ಣಾಕಿದರೆ ಸರ್ವನಾಶವಾಗ್ತಾರೆ ಎಂಬ ಹೇಳಿಕೆಗೆ ಟಾಂಗ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net