

ಚಿಕ್ಕೋಡಿ: ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಸಮೀಪದ ಯಕ್ಸಂಬಾದ ಶಿವಶಂಕರ ಜೊಲ್ಲೆ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಚಿಕ್ಕೋಡಿ ಉಪನಿರ್ದೇಶಕರ ಕಾರ್ಯಾಲಯದ ವಿಷಯ ಪರಿವೀಕ್ಷಕ ಎಚ್.ಎಸ್.ಖಾಡೆ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಮೂಲಕ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡುವುದು ಅವಶ್ಯ. ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ವಿದ್ಯಾರ್ಥಿ ಪ್ರತಿನಿಗಳಿಗೆ ಜವಾಬ್ದಾರಿ ಹಂಚಿಕೆ ಪದಗ್ರಹಣ ಜರುಗಿತು. ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಮುಖ್ಯೋಪಾಧ್ಯಾಯ ವಿ.ಆರ್.ಭಿವಸೆ ಪ್ರಾಸ್ತಾವಿಕ ಮಾತನಾಡಿದರು.
ಫೈಮಿದಾ ದಾಡಿವಾಲೆ, ಸುಜಾತಾ ಕಬಾಡೆ, ಲತಾ ವಾಳಕೆ, ಮಹಾದೇವಿ ಹುದ್ದಾರ, ಮಹಾದೇವಿ ಡೊಂಗರೆ, ಗಿರಿಜಾ ಪಾಟೀಲ, ವಿವೇಕಾನಂದ ಬಂಕೊಳ್ಳಿ, ಮುಖ್ಯ ಶಿಕ್ಷಕ ಎಸ್.ಜಿ.ಕಾಮತ್, ಆಶಾ ಚವ್ಹಾಣ, ಪಲ್ಲವಿ ಮಾಳಿ, ದರ್ಶನ ಅಕ್ಕೋಳೆ ಇತರರಿದ್ದರು.