'ನಿತ್ಯ ಕ್ರೀಡಾಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ'

2
Published on

ಮೈಸೂರು: ಇಂದಿನ ಯುವ ಜನಾಂಗವು ಸದೃಢವಾದ ಶಾರೀರ ಮತ್ತು ಮತ್ತು ಆರೋಗ್ಯಪೂರ್ಣ ಜೀವನ ನಿರ್ವಹಣೆ ಮಾಡಲು ದಿನವೂ ಕ್ರೀಡಾ ಚಟುವಟಿಕೆಯಲ್ಲಿ ತೊಡುಗುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಕ್ರೀಡಾ ತರಬೇತುದಾರ ಎಂ.ಎನ್.ವಿಕ್ರಮ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಎಂಎಂಕೆ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಮಹಾವಿದ್ಯಾಲದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯು ಗೌರವದ ಜತೆಗೆ ನಿತ್ಯವೂ ದೈಹಿಕ ಮತ್ತು ಮಾನಸಿಕ ಸಧೃಡತೆಯನ್ನು ನೀಡುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ಇಂದಿನ ಯುವ ಜನಾಂಗ ತೊಡಗಿಸಿಕೊಂಡು ಉತ್ತಮ ತರಬೇತಿ ಮತ್ತು ಪರಿಶ್ರಮದ ಮೂಲಕ ತಾವು ಬೆಳೆಯುವ ಜತೆಗೆ ಕಾಲೇಜಿನ ಕೀರ್ತಿಯನ್ನು ರಾಜ್ಯ ಮತ್ತು ದೇಶಕ್ಕೆ ಕೊಂಡೊಯ್ಯಬಹುದು. ಪಾಲಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೇರಣೆ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಾಯಿನಾಥ್ ಮಲ್ಲಿಗೆಮಾಡು ಮಾತನಾಡಿ, ಕಾಲೇಜಿನಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೆ ಮೊದಲ ಪ್ರಾಶಸ್ತ್ಯ ನೀಡಿ ಕ್ರೀಡಾ ಚಟುವಟಿಕೆ ಸಮಗ್ರ ಅಭಿವೃದ್ಧಿಗೆ ಅವಕಾಶ ನೀಡುತ್ತಿದ್ದೇವೆ. ಕಾಲೇಜಿನ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಯಾವುದಾದರೂ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯ ಮೂಲಕ ಉತ್ತಮ ಆರೋಗ್ಯ ಪಡೆಯಲು ಸಹಾಯವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿನಿ ಪಾಲಕ ಸಂಘದ ಅಧ್ಯಕ್ಷ ರಾಜೇಶ್, ಸದಸ್ಯ ಪರಮೇಶ್, ಕಾಲೇಜು ಐಕ್ಯೂಎಸಿ ಘಟಕದ ಸಂಚಾಲಕಿ ಪ್ರೊ.ಕೆ .ಎಸ್. ಸುಕೃತಾ, ಉಪ ಪ್ರಾಂಶುಪಾಲೆ ಪ್ರೊ.ಎನ್.ಭಾರತೀ, ವಿದ್ಯಾರ್ಥಿನಿ ಕ್ಷೇಮಪಾಲನಾಧಿಕಾರಿ ಪ್ರೊ.ಜಿ.ಜ್ಯೋತಿಲಕ್ಷ್ಮೀ, ಕಾವಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಮಾಲತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net