ಹಲ್ಲೆ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಿ

New Harshika New
Published on

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿಯ ಮನೆಗೆ ಬುಧವಾರ ಭೇಟಿ ನೀಡಿದ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ, ಬೆಂಗಳೂರಿನಲ್ಲಿ ಇತ್ತೀಚೆಗೆ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಶಿ ಅವರೊಂದಿಗೆ ಚರ್ಚೆ ನಡೆಸಿದರು.

ಕಳೆದ ಏ. 9ರಂದು ಬೆಂಗಳೂರಿನ ಪುಲಕೇಶಿ ನಗರದ ಮಾಸ್ಕ್ ರಸ್ತೆಯ ಹೋಟೆಲ್​ವೊಂದರಲ್ಲಿ ಊಟ ಮುಗಿಸಿ, ರ್ಪಾಂಗ್​ನತ್ತ ಹೊರಟಿದ್ದ ಹರ್ಷಿಕಾ ದಂಪತಿಯನ್ನು ತಡೆದ ಕಿಡಗೇಡಿಗಳು, ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲ್ಲೆ ಪ್ರಕರಣದಲ್ಲಿ ತಮಗೆ ನ್ಯಾಯ ಕೊಡಿಸುವಂತೆ ಸಚಿವ ಪ್ರಲ್ಹಾದ ಜೋಶಿ ಅವರನ್ನು ಹರ್ಷಿಕಾ ದಂಪತಿ ಕೋರಿದರು.

ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ನಮ್ಮ ಮೇಲೆ ಗಲಾಟೆ ಮಾಡಿದವರ ಮುಖಚರ್ಯು ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ ಎಂದು ಸಚಿವರ ಬಳಿ ಹೇಳಿದರು.

ನಮಗೆ ಆದಂತೆ ಬೇರೆ ಯಾರಿಗೂ ಆಗಬಾರದು. ಹಾಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದು, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ಭರವಸೆ ಇದೆ ಎಂದು ಹರ್ಷಿಕಾ ಪೂಣಚ್ಚ ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net