ಚುನಾವಣಾ ಆಯೋಗದಿಂದ ಅನುಮತಿ ಪಡೆಯಿರಿ

ಚುನಾವಣಾ ಆಯೋಗದಿಂದ ಅನುಮತಿ ಪಡೆಯಿರಿ
Published on

ಆಲೂರು: ಮದುವೆ, ಜಾತ್ರೆ ಇನ್ನಿತರ ಗುಂಪು ಕಾರ್ಯಕ್ರಮಗಳನ್ನು ನಡೆಸಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆಯಬೇಕು ಎಂದು ಚುನಾವಣಾ ವಿಚಕ್ಷಣಾ ದಳದ ಮುಖ್ಯಸ್ಥ, ಶಿಶು ಯೋಜನಾಧಿಕಾರಿ ಎ.ಟಿ.ಮಲ್ಲೇಶ್ ತಿಳಿಸಿದರು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಅಂಗವಾಗಿ ಪಟ್ಟಣದ ಶಸ್ತ್ರಾಸ್ತ್ರಗಳ ಅಂಗಡಿಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮದುವೆ, ಜಾತ್ರೆ, ಸುಗ್ಗಿಯಂತಹ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನುಆಚರಿಸುವ ಮುನ್ನ ತಾಲೂಕು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯಬೇಕು. ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಹಾಜರಾಗಿ ಮತಯಾಚನೆ ಮಾಡಿದರೆ ಸಮಾರಂಭದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದರು.ಹತ್ತು ಸಾವಿರ ರೂ.ಗಿಂತ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಕೊಂಡೊಯ್ಯುವಾಗ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಬ್ಯಾಂಕಿಗೆ ಹಣ ಜಮೆ ಮಾಡುವ ವಾಹನಗಳು, ಬಸ್ಸು ಮತ್ತು ಇತರ ವಾಹನಗಳನ್ನು ಪರಿಶೀಲನೆ ಮಾಡಲಾಗುವುದು. ಪ್ರತಿಯೊಬ್ಬರೂ ಚುನಾವಣೆ ನೀತಿ ಸಂಹಿತೆ ಪಾಲಿಸಬೇಕು ಎಂದರು. ತಾಲೂಕು ಪಂಚಾಯಿತಿ ಸಿಬ್ಬಂದಿ ಅಶೋಕ್, ಆನಂದ್, ವೆಂಕಟೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net