ಮೊಬೈಲ್​ ಗೀಳಿನಿಂದ ಹೊರಬನ್ನಿ

11Anand2
Published on

ಬೆಳಗಾವಿ: ವಿದ್ಯಾರ್ಥಿಗಳು ಮೊಬೈಲ್​ ಗೀಳಿಗೆ ಅಂಟಿಕೊಳ್ಳದೆ ಪರಿಶ್ರಮದಿಂದ ಓದಿ ಯಶಸ್ಸು ಕಾಣಬೇಕು. ಸಮಾಜದಲ್ಲಿ ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್​ ಸದಸ್ಯ ಡಾ. ಎಚ್​.ಎಸ್​. ಅನುಪಮಾ ಕಿವಿಮಾತು ಹೇಳಿದರು.

ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2024&25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುಖ್ಯ ಅತಿಥಿ ಆಗಮಿಸಿದ್ದ ನಿವೃತ್ತ ಐಪಿಎಸ್​ ಅಧಿಕಾರಿ ಭಾಸ್ಕರರಾವ್​ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕ್ಕೆ ಮಹತ್ವ ನೀಡಬೇಕು ಎಂದರು.

ಕುಲಸಚಿವ ಸಂತೋಷ ಕಾಮಗೌಡ, ಅಧ್ಯತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿದರು.

ಮೌಲ್ಯಮಾಪನ ಕುಲಸಚಿವ ಪ್ರೊ. ಡಿ.ಎನ್​. ಪಾಟೀಲ, ಹಣಕಾಸು ಅಧಿಕಾರಿ ಎಂ.ಎ. ಸಪ್ನ, ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಪ್ರೊ. ವೈ.ಎಸ್​. ಬಲವಂತಗೊಳ, ಪಿಜಿ ಜಿಮ್​ಖಾನಾ ನಿರ್ದೇಶಕ ಡಾ.ಕಿರಣಕುಮಾರ್​ ಪಿ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net