ಉತ್ತಮ ಶಿಕ್ಷಣ ಪಡೆದು ಸಂಸ್ಕಾರವಂತರಾಗಿ

meeting
Published on

ರೋಣ: ತಾಲೂಕಿನ ಕೊತಬಾಳ ಗ್ರಾಮದ ಡಿಪಿಇಪಿ ಶಾಲೆಯಲ್ಲಿ ಗ್ರಾಪಂ ವತಿಯಿಂದ ಮಕ್ಕಳ ಗ್ರಾಮಸಭೆ ಜರುಗಿತು.

ಸಭೆ ಉದ್ಘಾಟಿಸಿ ಮಾತನಾಡಿದ ಗ್ರಾಪಂ ಸದಸ್ಯ ವೀರಣ್ಣ ಯಾಳಗಿ, ‘ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಸಂಸ್ಕಾರವಂತರಾಗಬೇಕು. ಪೌಷ್ಠಿಕಾಂಶದ ಆಹಾರ ಸೇವನೆ ಮಾಡಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಎಸ್.ಎಸ್.ಅನಪೂರ ಮಾತನಾಡಿದರು. ಗ್ರಾಪಂ ಮಟ್ಟದಲ್ಲಿ ನಡೆದ ಗಣಿತ ಕಲಿಕಾ ಅಂದೋಲನ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ಭೀಮವ್ವ ಗುಳಗುಳ್ಳಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಹನಮಪ್ಪ ಅಸೂಟಿ, ಎಸ್‌ಡಿಎಂಸಿ ಅಧ್ಕಕ್ಷ ಯಲ್ಲಪ್ಪ ಮಾದರ, ಗ್ರಾಪಂ ಸದಸ್ಯರು, ಪಿಡಿಒ ಕಲ್ಪನಾ ಕಡಗದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net