ಗೆಜ್ಜಲಗೆರೆ ಗ್ರಾಪಂಗೆ ಶಶಿಕುಮಾರ್ ಉಪಾಧ್ಯಕ್ಷ

15M.D.R.1
ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಶಿಕುಮಾರ್ (ರವಿ) ಅವರು ಅವಿರೋಧವಾಗಿ ಆಯ್ಕೆಯಾದರು. ಸುವರ್ಣ, ಜಿ.ಸಿ.ಹರೀಶ್, ಜ.ಪಿ.ಆದಿಮೂರ್ತಿ, ಶಿವಯ್ಯ, ರಾಧಾ, ಲಕ್ಷ್ಮಮ್ಮ, ಜಯಮ್ಮ, ಭಾಗ್ಯಮ್ಮ ಇದ್ದರು.
Published on

ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಶಿಕುಮಾರ್ (ರವಿ) ಅವರು ಅವಿರೋಧವಾಗಿ ಆಯ್ಕೆಯಾದರು.

ಶಿವಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಶಶಿಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ವಿದ್ಯಾಶ್ರೀ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನೂತನ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರಿನ ಪೂರೈಕೆ, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮತ್ತು ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷೆ ಸುವರ್ಣ, ಸದಸ್ಯರಾದ ಜಿ.ಸಿ.ಹರೀಶ್, ಜ.ಪಿ.ಆದಿಮೂರ್ತಿ, ಶಿವಯ್ಯ, ರಾಧಾ, ಲಕ್ಷ್ಮಮ್ಮ, ಜಯಮ್ಮ, ಭಾಗ್ಯಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net