ಪುತ್ತೂರು ಗ್ರಾಮಾಂತರ: ದೇಯಿ ಬೈದ್ಯೆತಿ, ಕೋಟಿ-ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಆರಂಭಗೊಳ್ಳಲಿರುವ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಮೊಕ್ತೇಸರ ಶ್ರೀಧರ ಪೂಜಾರಿ, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಕೋಶಾಧಿಕಾರಿ ಮೋಹನ್‌ದಾಸ್ ಬಂಗೇರ, ಪ್ರಮಲ ಕುಮಾರ್, ಬಿರ್ವ ಸಂಜೀವ ಪೂಜಾರಿ, ಸುಜಿತ ವಿ. ಬಂಗೇರ, ವಿದ್ಯಾ ರಾಕೇಶ್, ನಾರಾಯಣ ಮಚ್ಚಿನ, ಹರೀಶ್ ಪೂಜಾರಿ, ಸುಮಾ ಪ್ರಮೋದ್, ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ. ಸ್ವಾಗತಿಸಿದರು. ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್ ವಂದಿಸಿದರು.
2ರಂದು ಅಮ್ಮನ ಮಡಿಲ ಪ್ರಸಾದ
ಗೆಜ್ಜೆಗಿರಿ ಕ್ಷೇತ್ರದ ಮಹಾಮಾತೆ ದೇಯಿ ಬೈದ್ಯೆತಿ ಅಮ್ಮನವರ ಮಹಾಸಂಕಲ್ಪದಂತೆ ಮಾ.2ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆ ತನಕ ಮಡಿಲು ತುಂಬಿಸುವ (ಅಮ್ಮನ ಮಡಿಲ ಪ್ರಸಾದ) ಕಾರ್ಯಕ್ರಮ ನಡೆಯಲಿದೆ. ಶ್ರೀಕ್ಷೇತ್ರದ ವತಿಯಿಂದ ಜಾತ್ರಾ ಮಹೋತ್ಸವದ ಸಂದರ್ಭ ನೀಡುವ ಅಮ್ಮನ ಮಡಿಲ ಪ್ರಸಾದವನ್ನು ನಾಡಿನ ಎಲ್ಲ ಮಾತೆಯರು ಸ್ವೀಕರಿಸಬೇಕು ಎಂದು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ತಿಳಿಸಿದ್ದಾರೆ.