ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಂಪನ್ನ

gaati gaati
ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ
Published on

ವಿಜಯವಾಣಿ ಸುದ್ದಿಜಾಲ ತೂಬಗೆರೆ
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಬ್ರಹ್ಮರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಸ್ವಾಮಿಗೆ ಬೆಳಗಿನ ಜಾವ 2 ಗಂಟೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮ ಆರಂಭಿಸಲಾಯಿತು. ಸುಬ್ರಹ್ಮಣ್ಯಸ್ವಾಮಿ ಹಾಗೂ ನರಸಿಂಹಸ್ವಾಮಿಗೆ 108 ಹಾಲಿನಿಂದ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀಗಂಧ ಅಭಿಷೇಕ, ಭಸ್ಮದಭಿಷೇಕದ ಬಳಿಕ ಹೂವಿನ ಅಲಂಕಾರ ಮಾಡಲಾಯಿತು. ಬೆಳಗ್ಗೆ 4.30ಕ್ಕೆ ಮಹಾಮಂಗಳಾರತಿ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಬಿಡಲಾಯಿತು. ರಥೋತ್ಸವಕ್ಕೆ ಭಕ್ತಾದಿಗಳು ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು ದೇವಾಲಯವನ್ನು ಕಣ್ಮನ ಸೆಳೆಯುವಂತೆ ಪುಷ್ಪ ಮತ್ತು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿತ್ತು. ವಿಶೇಷವಾಗಿ ಮೊದಲ ಬಾರಿಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಭಾವಚಿತ್ರಗಳು ನೋಡುಗರ ಗಮನಸೆಳೆದವು.
ಚಿನ್ನಾಭರಣ ಕಳ್ಳತನ ಸೇರಿ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಡ್ರೋನ್ ಕ್ಯಾಮರಾ ಮತ್ತು ಅಲ್ಲಲ್ಲಿ ಸಿಸಿಸಿ ಕ್ಯಾಮರಾ ಅಳವಡಿಸಲಾಗಿತ್ತು, ಕ್ಷೇತ್ರಕ್ಕೆ ಬಂದ ಭಕ್ತರಿಗೆ ತಾತ್ಕಾಲಿಕ ಶೌಚಗೃಹ, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಾಲಯ ವತಿಯಿಂದ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net