ಸಿಎಂಗೆ ಉಡುಗೊರೆ ನೀಡಿದ ರಜತ್

IMG-20231217-WA0020.jpg
Published on

ಹುಬ್ಬಳ್ಳಿ: ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಖಾಸಗಿ ಹೋಟೆಲ್ನಲ್ಲಿ ಭೇಟಿ ಮಾಡಿದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು ಸುಂದರ ಕಲಾಕೃತಿ ಉಡುಗೊರೆ ನೀಡುವ ಮೂಲಕ ಗಮನ ಸೆಳೆದರು.

ಮೈಸೂರು ಸ್ಯಾಂಡಲ್ ಸೋಪ್ನಿಂದ ತಯಾರಿಸಿದ ಸಿದ್ದರಾಮಯ್ಯ ಅವರ ಕಲಾಕೃತಿಯನ್ನು ನೀಡಿ ಗೌರವಿಸಿದರು. ತಮ್ಮ ಕಲಾಕೃತಿ ನೋಡಿದ ಸಿಎಂ ಹರ್ಷ ವ್ಯಕ್ತ ಪಡಿಸಿದರು.

ಕಲಾವಿದ ಬಸವರಾಜ ಜಿಗಜಿನ್ನಿ ಅವರಿಂದ ರಜತ್ ಅವರು ಈ ಕಲಾಕೃತಿ ತಯಾರು ಮಾಡಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಉದ್ಯಮಿ ಇರ್ಫಾನ್ ಖಾನ್, ಜಿಲ್ಲಾಧ್ಯಕ್ಷರಾದ ಅನಿಲಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) ಕಾಂಗ್ರೆಸ್ ಸರ್ಕಾರದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಮೈಸೂರು ಸ್ಯಾಂಡಲ್ ಎಂದೇ ಜನಮಾನಸದಲ್ಲಿ ಸದಾ ಹಸಿರಾಗಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net