

ಮೂಗೂರು: ಗ್ರಾಮದ ಶ್ರೀ ದೇಶೇಶ್ವರ ಸ್ವಾಮಿ ದೇಗುಲದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ದೇವಾಲಯದಲ್ಲಿ ಶ್ರೀ ದೇಶೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರಿಗೆ ಅಭಿಷೇಕ, ವಿಶೇಷ ಪೂಜೆಗಳು ನೆರವೇರಿದವು. ಪಾರ್ವತಿ ದೇವಿ ಮೂರ್ತಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಗ್ರಾಮದ ಮಹಿಳೆಯರು ಪೂಜೆ ಸಲ್ಲಿಸಿದರು. ದೇಗುಲದ ಆವರಣದಲ್ಲಿ ಧಾರ್ಮಿಕ ಸಂಪ್ರದಾಯದಂತೆ ಮಾಂಗಲ್ಯ ಧಾರಣೆಯೊಂದಿಗೆ ಗಿರಿಜಾ ಕಲ್ಯಾಣ ಮಹೋತ್ಸವ ನೆರವೇರಿಸಲಾಯಿತು. ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಆನಂದ್ ದೀಕ್ಷಿತ್, ಸುಬ್ರಹ್ಮಣ್ಯ ಶಾಸ್ತ್ರಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಗ್ರಾಮಸ್ಥರು ಉಪಸ್ಥಿತರಿದ್ದರು.