ಈಶ್ವರ ದೇಗುಲದಲ್ಲಿ ಗಿರಿಜಾ ಕಲ್ಯಾಣೋತ್ಸವ ಸಂಪನ್ನ

22BTP01
Published on

 ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಅತ್ತಿಗೋಡು ಗ್ರಾಮದ ಶ್ರೀ ಈಶ್ವರ ದೇವಾಲಯದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಗಿರಿಜಾ ಕಲ್ಯಾಣೋತ್ಸವ ಸಂಪನ್ನಗೊಂಡಿತು.

ದೇವಸ್ಥಾನದ ಆವರಣದಲ್ಲಿ ಅರ್ಚಕ ಅಮರಾಯ್ಯ ಶಾಸ್ತ್ರಿ ನೇತೃತ್ವದಲ್ಲಿ ಗುರುವಾರ ಮುಂಜಾನೆಯಿಂದಲ್ಲೇ ಗಂಗಾಕಳಶ, ಪೂಜೆ, ಕಳಶಸ್ಥಾಪನೆ, ಅಷ್ಟೋತ್ತರ ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕೈಕಂರ್ಯಗಳು ಜರುಗಿದವು. ಶಿವಪಾರ್ವತಿ ಮಾಂಗಲ್ಯ ಧಾರಣೆ ಮೂಲಕ ಗಿರಿಜಾ ಕಲ್ಯಾಣೋತ್ಸವ ಭಕ್ತರ ಜೈಕಾರದೊಂದಿಗೆ ಸಡಗರ ಸಂಭ್ರಮದಿಂದ ನೆರವೇರಿತು.

ಕಲ್ಯಾಣೋತ್ಸವ ಬಳಿಕ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಪುಷ್ಪಗಳಿಂದ ಅಲಂಕಾರಗೊಂಡ ಪಲ್ಲಕಿ ಮೇಲೆ ಪ್ರತಿಷ್ಠಾಪಿಸಿ ಕಲಾ ತಂಡ ಮತ್ತು ವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net