

ಚಾಮರಾಜನಗರ : ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ಬುಧವಾರ ಸಂಜೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕಿಯೊಬ್ಬಳು ತೀವ್ರ ಗಾಯಗೊಂಡಿದ್ದಾಳೆ.
ಗ್ರಾಮದ ಉಪ್ಪಾರ ಬಡಾವಣೆಯ ಚಿಕ್ಕಸ್ವಾಮಿ-ಮೀನಾಕ್ಷಿ ಎಂಬುವವರ ಪುತ್ರಿ ಶ್ರಾವಣಿ(3) ಗಾಯಗೊಂಡ ಬಾಲಕಿ. ಓವರ್‌ಹೆಡ್ ಟ್ಯಾಂಕ್ ಬಳಿ ಆಟವಾಡುತ್ತಿದ್ದ ಸಂದರ್ಭ ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕಿಯ ಚೀರಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಯಳಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ತಲೆ, ಕುತ್ತಿಗೆ, ಕೈ, ಕಾಲುಗಳಿಗೆ ಗಾಯಗಳಾಗಿವೆ.