ಕಲಿಕಾ ಸಮಯವನ್ನು ಸದುಪಯೋಗ ಮಾಡಿಕೊಳ್ಳಿ

1001714017
??????????????
Published on

ಹೊಳೆನರಸೀಪುರ : ಕಲಿಕಾ ಸಮಯದಲ್ಲಿ ದೊರೆಯುವ ಅವಕಾಶವನ್ನು ಬಳಕೆ ಮಾಡಿಕೊಂಡು,ಸಾಧನೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ನಿವೇದಿತಾ ಮಹಾಂತೇಶ್ ಮುನವಳ್ಳಿ ಮಠ ಹೇಳಿದರು.

ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನ ನೀಡಿ ಗೌರವಿಸಲಾಗಿದೆ. ಹಿಂದೆ ಇದ್ದಂತಹ ಪರಿಸ್ಥಿತಿ ಇಂದು ಸುಧಾರಣೆಗೊಂಡಿದೆ. ಮಹಿಳೆಗೆ ಇರುವ ಜಾಣ್ಮೆ ಹಾಗೂ ಬದ್ಧತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಅವಕಾಶ ದೊರಕಿದೆ. ವಿದ್ಯಾರ್ಥಿನಿಯರು ಇವುಗಳನ್ನು ಮಾದರಿಯಾಗಿ ಇರಿಸಿಕೊಂಡು ಸಾಧನೆ ಮಾಡಬೇಕು ಎಂದರು.

ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಆರ್.ದೇವರಾಜ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಶಿವಕುಮಾರ್ ಇತರರು ಮಾತನಾಡಿದರು. ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಬಹುಮಾನ ಪಡೆದ ವಿದ್ಯಾರ್ಥಿನಿ ಸಾನಿಯಾಗೆ ಅಭಿನಂದಿಸಲಾಯಿತು. ಅಪರ ಸಿವಿಲ್ ನ್ಯಾಯಾಧೀಶೆ ಐಶ್ವರ್ಯಾ ಗುಡದಿನ್ನಿ, ಸರ್ಕಾರಿ ಬಾಲಕಿಯರ ಕಾಲೇಜು ಉಪ ಪ್ರಾಂಶುಪಾಲ ಕಾಳೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net