ಹೆಣ್ಣು ಮಕ್ಕಳ ದಿನಾಚರಣೆ, ಸಮಾನತೆಯ ವಾತಾವರಣ ನಿರ್ಮಾಣಕ್ಕೆ ಕರೆ

24cbp6
Published on

ಚಿಕ್ಕಬಳ್ಳಾಪುರ: ಲಿಂಗಾನುಪಾತದಲ್ಲಿ ಸಮಾನತೆಯನ್ನು ಸಾಧಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕೈಗೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಹೆಣ್ಣು ಮಗು ಮನೆಯ ನಂದಾದೀಪ. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದರ ಜತೆಗೆ ಹೆಣ್ಣು ಭ್ರೂಣಹತ್ಯೆ ಹೋಗಲಾಡಿಸಲು, ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ ಮಂಜುಳಾ, ವೈದ್ಯಾಧಿಕಾರಿ ಶಿವಕುಮಾರ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜುಂಜಣ್ಣ ಮತ್ತಿತರರು ಇದ್ದರು.

*೧ ಸಾವಿರ ರೂ ಗಿಫ್ಟ್

ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ ನೀಡುವಂತೆ ಆರೋಗ್ಯ ಸಚಿವರು ಸೂಚಿಸಿದ್ದಾರೆ. ಅದರಂತೆ ಮಗುವಿಗೆ ತಲಾ 1 ಸಾವಿರ ರೂ ಬೆಲೆಯ ಮಕ್ಕಳ ಕಿಟ್ ಗಳನ್ನು ಉಡುಗೊರೆಯಾಗಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net