ನೇಣಿಗೆ ಕೊರಳೊಡ್ಡಿದ ಯುವತಿಗೆ ವರವಾಗಬೇಕಿದ್ದ ಪ್ರೀತಿಯೇ ಶಾಪವಾಯ್ತು

Girl Suicide
Published on

ಆನೇಕಲ್: ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ ಟೌನ್​ನಲ್ಲಿ ಸೋಮವಾರ ನಡೆದಿದೆ.

ಬಿ.ತನುಜ(22) ನೇಣಿಗೆ ಶರಣಾದ ಯುವತಿ. ದ್ವಿತೀಯ ಪಿಯುಸಿ ಓದಿದ್ದ ತನುಜ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ 6 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ತನುಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.

ತನುಜ ಅವರ ತಂದೆ-ತಾಯಿ ಕೈಮಗ್ಗ ನಡೆಸುತ್ತ ಜೀವನ ನಡೆಸುತ್ತಿದ್ದಾರೆ. ಇದೀಗ ಬೆಳೆದ ಮಗಳನ್ನು ಕಳೆದುಕೊಂಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹವನ್ನು ಮುಂದಿನ ಕ್ರಮಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net