ಕಾರು ಹರಿದು ಬಾಲಕಿ ಸಾವು

accident-15
Published on

ಹುಬ್ಬಳ್ಳಿ: ಇಲ್ಲಿಯ ಆನಂದನಗರದಲ್ಲಿ ಗುರುವಾರ ಸಂಜೆ ಮೂರು ವರ್ಷದ ಬಾಲಕಿ ಆಜಿಯಾ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಅಲ್ತಾಫ್ ತೋರಗಲ್ ಎಂಬ ಯುವಕ ಕಾರು ಚಾಲನೆ ಮಾಡುತ್ತಿದ್ದ ವೇಳೆ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಆಜಿಯಾ ಮೇಲೆ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣವೇ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net