ಡೆಂಘೆ ಯಿಂದ ಬಾಲಕಿ ಸಾವು

dengue
Published on

ಮೈಸೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ವರ್ಷದ ಬಾಲಕಿ ಡೆಂಘೆಗೆ ಬಲಿಯಾಗಿದ್ದಾಳೆ.

5 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ವರ್ಷಿಣಿಗೆ ಸಮೀಪದ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಜ್ವರ ನಿಯಂತ್ರಣಕ್ಕೆ ಬಂದಿರಲಿಲ್ಲ.

ಕಳೆದ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತದ ಪರೀಕ್ಷೆ ಮಾಡಿಸಿದಾಗ ಡೆಂೆ ಜ್ವರ ಇರುವುದು ದೃಢಪಟ್ಟಿತ್ತು. ಬುಧವಾರ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಐಸಿಯುಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿತ್ತಾದರೂ ಸಂಜೆ ವೇಳೆ ಬಾಲಕಿ ಮೃತಪಟ್ಟಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net