ಜ್ವರದಿಂದ ಬಾಲಕಿ ಸಾವು

7 mlv 4 ____(2)
ಬಾನು
Published on

ಮಳವಳ್ಳಿ: ತಾಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಪ್ರಕಾಶ್ ಎಂಬುವರ ಪುತ್ರಿ ಬಾನು (12) ಜ್ವರದಿಂದ ಮೃತಪಟ್ಟಿದ್ದಾಳೆ.

ತಾಲೂಕಿನ ಕುಂದೂರು ಗ್ರಾಮದಲ್ಲಿರುವ ಅಜ್ಜಿಯ ಮನೆಯಲ್ಲಿದ್ದುಕೊಂಡು 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಸ್ವ ಗ್ರಾಮಕ್ಕೆ ಬಂದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಳು. ಶುಕ್ರವಾರ ಬೆಳಗಿನ ಜಾವ ಸುಸ್ತಾಗುತ್ತಿರುವುದಾಗಿ ಪಾಲಕರಿಗೆ ತಿಳಿಸಿದ್ದಾಳೆ. ಕೂಡಲೇ ಪಾಲಕರು ಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆತಂದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಬಾಲಕಿ ಲೋ ಬಿಪಿಯಿಂದ ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net