ಹಾವೇರಿ: ಜಮೀನಿನಲ್ಲಿ ಆಟವಾಡುತ್ತಿದ್ದ ಬಾಲಕಿಯೊಬ್ಬಳು ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ..ಭಾರತಿ ಸಿದ್ದಪ್ಪ ಮಾಳಪ್ಪನವರ (11) ಮೃತ ಬಾಲಕಿ..ಬಾಲಕಿಯೂ ಜಮೀನಿನಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.