ಬಾಲಕಿ ಮೇಲೆ ಅತ್ಯಾಚಾರ ಎಸಗಿದವನ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಿ; ಸಿಂಧನೂರಲ್ಲಿ ಬೃಹತ್ ಪ್ರತಿಭಟನೆ

030220 Students Protest for Arrest Rapest
Published on

ಸಿಂಧನೂರು: ವಸತಿ ನಿಲಯವೊಂದರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿ ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಅತ್ಯಾಚಾರ ಮಾಡಿದ ದುಷ್ಕರ್ಮಿಯನ್ನು ಕೂಡಲೇ ಬಂಧಿಸಬೇಕು. ಬಾಲಕಿಯ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಚಿಕಿತ್ಸೆ ಕೊಡಿಸಬೇಕು. ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಗ್ರಾಮೀಣ ಪ್ರದೇಶದ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಮಕ್ಕಳ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಬೀಟ್ ಹೆಚ್ಚಿಸಿ, ಗ್ರಾಮಸ್ಥರಿಗೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಬೇಕು.

ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ, ಜಾತಿ ನಿರ್ಮೂಲನೆ ಚಳವಳಿ ಸಂಚಾಲಕ ಎಚ್.ಎನ್.ಬಡಿಗೇರ್, ನಗರಸಭೆ ಸದಸ್ಯ ಕೆ.ಜಿಲಾನಿಪಾಷಾ, ವೆಲ್ಪೇರ್ ಪಾರ್ಟಿಯ ಖಾನ್‌ಸಾಬ್, ಕಸಾಪ ತಾಲೂಕು ಅಧ್ಯಕ್ಷೆ ಸರಸ್ವತಿ ಪಾಟೀಲ್, ಭೋವಿ ಸಮುದಾಯದ ಮುಖಂಡ ಅಶೋಕ ಉಮಲೂಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net