ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

raped
Published on

ಸಿಂಧನೂರು: ತಾಲೂಕಿನ ಗ್ರಾಮವೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಜ್ಮೀರ್ ಎಲಿಗಾರ ಬಂಧಿತ. ಶುಕ್ರವಾರ ಬಾಲಕಿಗೆ ಹಣ ನೀಡುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಶನಿವಾರ ಬಾಲಕಿ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷೆ ಮಾಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಬಳಗಾನೂರು ಠಾಣೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಅಜ್ಮೀರ್‌ನನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net