ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ: ಮನನೊಂದ ಬಾಲಕಿ ನೇಣಿಗೆ ಶರಣು

girl hang
Published on

ಮಂಗಳೂರು:ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.

ಕಣಿಯೂರು ನಿವಾಸಿ ಸಾಹುಲ್ ಹಮೀದ್ ವಿರುದ್ಧ ದೂರು ದಾಖಲಾಗಿದೆ. ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ಬಾಲಕಿ ಕುಟುಂಬ ವಾಸಿಸುತ್ತಿತ್ತು, ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಬಾಲಕಿ ಮನೆಗೆ ವಿ.ಎಚ್.ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಪ್ರಾಪ್ತ ಬಾಲಕಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದು, ಸಾಹುಲ್ ಹಮೀದ್ ನನ್ನು ಬಂಧಿಸಿ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net