

ಬ್ಯಾಡಗಿ: ಶಂಕಿತ ಡೆಂಘೆ ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಜರುಗಿದೆ.
ಪಟ್ಟಣದ ಅಗಸನಹಳ್ಳಿ ಗ್ರಾಮದ ಅಪೇಕ್ಷ ಮಾಲತೇಶ ಗೂರಣ್ಣನವರ (6) ಮೃತ ಬಾಲಕಿ. ಬಾಲಕಿ ಇಲ್ಲಿನ ಬಿಇಎಸ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಳು. ಬಾಲಕಿಗೆ ಕಳೆದ ಒಂದು ವಾರದ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.