ನೇಣಿಗೆ ಶರಣಾದ ಯುವತಿ: ಕಾರಣ ನಿಗೂಢ

Girl Suicide
Published on

ಮಂಗಳೂರು: ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೊಳ್ಳಾಜೆಯ ಗ್ರಾಮದಲ್ಲಿ ನಡೆದಿದೆ.   

ಮೃತಳನ್ನು ಬೊಳ್ಳಾಜೆಯ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net