

ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಹಿಂದು ಹೆಣ್ಣು ಮಕ್ಕಳನ್ನು ಮೋಸದ ಜಾಲಕ್ಕೆ ಬೀಳಿಸುತ್ತಿರುವ ಘಟನೆಗಳು ಹೆಚ್ಚೆಚ್ಚು ನಡೆಯುತ್ತಿದೆ. ಲವ್ ಜಿಹಾದ್ ಜಾಲಕ್ಕೆ ಸಿಲುಕಿದ ಅದೆಷ್ಟೋ ಮಂದಿ ಜೀವವನ್ನೇ ಕಳೆದುಕೊಂಡರೆ, ಅನೇಕರು ಈ ಜಾಲದಿಂದ ಹೊರಬರಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಹಿಂದು ಸಮಾಜದ ಹೆಣ್ಣುಮಕ್ಕಳಿಗೆ ಈ ಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.
ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ಎಸ್.ವಿ.ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಕಿಶೋರಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತ ಗಣರಾಜ್ ಭಟ್ ಕೆದಿಲ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಶಿಶು ಮಂದಿರ ಮಾಜಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಕಾರ್ಯದರ್ಶಿ ಚಂದ್ರಿಕಾ ಧನ್ಯಾ, ಟ್ರಸ್ಟಿ ಕಲ್ಪನಾ ಭಾಸ್ಕರ, ಶಿಶು ಮಂದಿರದ ಕಾರ್ಯದರ್ಶಿ ಅಶ್ವಿತಾ ಜಿ.ಪೈ, ಶ್ರೀನಿವಾಸ ಎಂ., ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ, ಮಾತಾಜಿ ಪ್ರೇಮಾ, ಮಾತಾಜಿ ರತ್ನಾ ಉಪಸ್ಥಿತರಿದ್ದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ನಿರೂಪಿಸಿದರು.