ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

web 2
Published on

ಧಾರವಾಡ: ಹಣಕಾಸು ಸೇರ್ಪಡೆ ಹಾಗೂ ಅಭಿವದ್ಧಿ ಇಲಾಖೆ, ಭಾರತೀಯ ರೀಸರ್ವ್ ಬ್ಯಾಂಕ್ ಹಾಗೂ ಕರ್ನಾಟಕ ಸಮಗ್ರ ಶಿಕ್ಷಣ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಆರ್‌ಬಿಐ ರಸಪ್ರಶ್ನೆ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಂದಗೋಳ ತಾಲೂಕು ಬೆಟದೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಗೌತಮಿ ಸಬರದ ಪ್ರಥಮ, ಧಾರವಾಡ ಶಹರ ವಲಯದ ಸರ್ಕಾರಿ ಪ್ರೌಢಶಾಲೆ ಕಮಲಾಪುರದ ತಹರಿಮಾ ದಳವಾಯಿ ದ್ವಿತೀಯ ಸ್ಥಾನ ಪಡೆದು ಆಯ್ಕೆಯಾಗಿದ್ದಾರೆ. ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಇಲಾಖೆಯ ಅಧಿಕಾರಿಗಳು ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net