ಹೆಣ್ಣು ಮಕ್ಕಳು ಕಲಿಕೆಗೆ ಒತ್ತು ನೀಡಲಿ

ಹೆಣ್ಣು ಮಕ್ಕಳು ಕಲಿಕೆಗೆ ಒತ್ತು ನೀಡಲಿ
Published on

ಅರಕಲಗೂಡು: ಹೆಣ್ಣು ಮಕ್ಕಳು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡಬೇಕು ಎಂದು ಶಾಸಕ ಎ. ಮಂಜು ಸಲಹೆ ನೀಡಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಹೆಣ್ಣು ಮಕ್ಕಳು ಮುಂದಿನ ಜೀವನ ರೂಪಿಸಿಕೊಳ್ಳಲು ಶಿಕ್ಷಣ ಅತಿಮುಖ್ಯವಾಗಿದೆ. ಸಮಾಜದ ಉನ್ನತಿಗೆ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದರು.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಸಾಯನ ಶಾಸತ್ರ ವಿಷಯದಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ತರಲು ಶ್ರಮಿಸಿದ ಉಪನ್ಯಾಸಕಿ ಎಚ್.ಸಿ. ಶ್ವೇತಾ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಾಂಶುಪಾಲ ಕೆ.ಬಿ.ಅನಂತರಾಜು, ಬಿ.ಪಿ.ಬಸವರಾಜು, ಸಿಡಿಸಿ ಉಪಾಧ್ಯಕ್ಷ ಮಂಜುನಾಥ್, ಸದಸ್ಯ ಮಹೇಶ್ವರಿ, ಗಾಯಿತ್ರಿ, ನಾಗರಾಜು, ಮಂಜು, ಮೋಹನ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net