ಗೀತಾ ಪಠಣ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಗೀತಾ ಜಯಂತಿ ಅಂಗವಾಗಿ ಧಾರವಾಡ ತಾಲೂಕು ಬ್ರಾಹ್ಮಣ ಸಭಾ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಗೊಲ್ಲರ ಕಾಲನಿಯ ಶ್ರೀ ಗಡಿ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಡಿ. 24ರಂದು ಸಂಜೆ 5 ಗಂಟೆಗೆ ಗೀತಾ ಪಠಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಬ್ರಾಹ್ಮಣ ಸಭಾ ಅಧ್ಯಕ್ಷ ಆರ್​.ಡಿ. ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಪ್ರಮೋದ ಮುತಾಲಿಕ, ಸುಮಂಗಲಾ ದಾಂಡೆವಾಲೆ ಆಗಮಿಸಲಿದ್ದಾರೆ. ಜಿಲ್ಲಾ ಗೊಲ್ಲರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುನಾಥ ಹುಲಗೂರ ಅಧ್ಯಕ್ಷತೆ ವಹಿಸಲಿದ್ದಾರೆ. ವಿದುಷಿ ರಾಧಾ ದೇಸಾಯಿ ಹಾಗೂ ಬ್ರಾಹ್ಮಣ ಸಭಾ ಮಹಿಳಾ ಸದಸ್ಯರು ಗೀತಾ ಪಠಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net