

ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್ಕೆ ಟೆಕ್ಸ್ಟೈಲ್ಸ್ನವರ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಪ್ರತ್ಯೇಕ ವಿಭಾಗ ಅ.9ರಂದು ಬೆಳಗ್ಗೆ 9.45ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂತೋಷ್ ವಾಗ್ಲೆ, ಕರಾವಳಿ ಕರ್ನಾಟಕದ ಅತೀ ವಿಶಾಲವಾದ ಗೀತಾಂಜಲಿ ಸಿಲ್ಕ್ ಮಳಿಗೆಯಲ್ಲಿ ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ಬಟ್ಟೆಗಳ ಪ್ರತ್ಯೇಕ ಮಹಡಿಗಳನ್ನು ಹೊಂದಿದ್ದು, ಇದೀಗ ಒಂದನೇ ಮಹಡಿಯಲ್ಲಿ ಪುರುಷರ ಸ್ವದೇಶಿ ಮತ್ತು ವಿದೇಶಿ 22ಕ್ಕೂ ಅಧಿಕ ಬ್ರ್ಯಾಂಡ್ಗಳ ಮಳಿಗೆಯನ್ನು ಆರಂಭಿಸಲಾಗುತ್ತಿದೆ. ಗ್ರಾಹಕರ ಪ್ರೋತ್ಸಾಹದಿಂದಲೇ ತಮ್ಮ ವ್ಯವಹಾರವು ಈ ಮಟ್ಟಕ್ಕೆ ಬೆಳೆದಿದೆ. ಆದ್ದರಿಂದ ಗ್ರಾಹಕರೇ ಹೊಸ ವಿಭಾಗವನ್ನು ಉದ್ಘಾಟಿಸಲಿದ್ದಾರೆ ಎಂದರು.
ನೂತನ ವಿಭಾಗದಲ್ಲಿ ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅಗತ್ಯವಿರುವ ಪಾರಂಪರಿಕ ಮತ್ತು ಆಧುನಿಕ ಶೈಲಿಯ ಬಟ್ಟೆಗಳು, ಆಫೀಸ್ ವೇರ್, ಡೈಲಿ ವೇರ್, ಕ್ಯಾಶುವಲ್ ವೇರ್, ಪಾರ್ಟಿ ವೇರ್ ಇತ್ಯಾದಿಗಳ ವಿಫುಲ ಸಂಗ್ರಹವನ್ನಡಲಾಗಿದೆ. ಅಲ್ಲದೇ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸೂಟಿಂಗ್ಸ್ - ಶರ್ಟಿಂಗ್ಸ್ ಜೊತೆಗೆ ಒಳಉಡುಪುಗಳು ಲಭ್ಯವಿದೆ ಎಂದವರು ಹೇಳಿದರು.
ಸುಮಾರು 15 ಸಾವಿರ ಚದರಡಿ ವಿಸ್ತೀರ್ಣದ ಈ ಮಹಡಿಯಲ್ಲಿ ದೇಶಿ ಮತ್ತು ವಿದೇಶಿ ಬ್ರ್ಯಾಂಡ್ ಗಳ ಪ್ರತ್ಯೇಕ ವಿಭಾಗಗಳಿವೆ. ಪೀಟರ್ ಇಂಗ್ಲೆಡ್, ಲಿನನ್ ಕ್ಲಬ್, ಕಿಲ್ಲರ್, ಫ್ಲೈಯಿಂಗ್ ಮೇಶಿನ್, ಅಲನ್ ಸೂಲಿ, ವ್ಯಾನ್ ಹ್ಯುಸೆನ್, ಲೂಯಿಸ್ ಪಿಲಿಪ್, ಜಾನ್ ಪ್ಲೇಯರ್, ಲೆವಿಸ್ ಇತ್ಯಾದಿ ಬ್ರ್ಯಾಂಡ್ ಗಳ ಫಾರ್ಮಲ್, ಜೀನ್ಸ್ ಬಟ್ಟೆಗಳು ಲಭ್ಯ ಇವೆ ಎಂದರು. ಸುದ್ದಿಗೋಷ್ಠಿಯಲ್ಲಿ ರಾಮಕೃಷ್ಣ ನಾಯಕ್, ಲಕ್ಷ್ಮಣ ನಾಯಕ್, ರಮೇಶ್ ನಾಯಕ್ ಮತ್ತು ಹರೀಶ್ ನಾಯಕ್ ಉಪಸ್ಥಿತರಿದ್ದರು.