

ವಿಜಯಪುರ:ಅಲೆಮಾರಿಗಳಿಗೆ ಶೇ. 1 ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂರ್ಷ ಸಮಿತಿ (ದಾದಾಸಾಹೇಬ ಡಾ. ಎಲ್. ಮೂರ್ತಿ ಸ್ಥಾಪಿತ) ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿ ನಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಿತಿ ಜಿಲ್ಲಾಧ್ಯಕ್ಷ ಅಶೋಕ ಕರೆಕಲ್ಲ ಮಾತನಾಡಿ, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಸಲ್ಲಿಸಿದ ವರದಿಯು ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಪೂರಕವಾಗಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ 101 ಪರಿಶಿಷ್ಟ ಜಾತಿಗಳಲ್ಲಿ ಹಿಂದುಳಿದಿರುವಿಕೆಯ ಡಾಟಾ ಸಂಗ್ರಹಿಸಿ ಸಲ್ಲಿಸಿದ್ದ ವರದಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲದೆ, ವರದಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಪ್ರಬಲ ಜಾತಿಗಳು ಬೀಸುವ ದೊಣ್ಣೆ ಏಟಿನಿಂದ ತಪ್ಪಿಸಿಕೊಳ್ಳಲು ಹಾಗೂ ರಾಜಕೀಯ ಲಾಭದ ಹಿನ್ನೆಲೆಯಲ್ಲಿ ವರ್ಗೀಕರಣ ಮಾಡಿದೆ ಎಂದು ದೂರಿದರು.
ರಾಜ್ಯ ಸರ್ಕಾರ ವರ್ಗೀಕರಿಸಿದ 59 ಅಲೆಮಾರಿ ಹಾಗೂ ಅರೆ ಅಲೆಮಾರಿ ಜಾತಿಗಳಿಗೆ ಮರಣ ಶಾಸನವಾಗಿ ಪರಿಣಮಿಸಿದೆ. 59 ಅಲೆಮಾರಿ ಹಾಗೂ ಅರೆ ಅಲೆಮಾರಿ ಜಾತಿಗಳು ತೀರ ಹಿಂದುಳಿದಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಔದ್ಯೋಗಿಕ ಮತ್ತು ರಾಜಕೀಯವಾಗಿ ಮುಂದುವರಿದಿರುವ ಭೋವಿ, ಲಮಾಣಿ, ಕೊರಮ, ಕೊರಚ, ಸೃಶ್ಯ ಜಾತಿಗಳೊಟ್ಟಿಗೆ ಅಲೆಮಾರಿಗಳನ್ನು ಸೇರಿಸಿ ವರ್ಗೀಕರಿಸಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ದಲಿತ ಸಂರ್ಷ ಸಮಿತಿ ಪ್ರಧಾನ ಕಾರ್ಯದರ್ಶಿ ಶರಣು ದೊಡಮನಿ ಮಾತನಾಡಿ, 59 ಅಲೆಮಾರಿ ಜಾತಿಗಳಿಗೆ ಕೂಡಲೇ ಶೇ. 1 ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಆದಿ ಕರ್ನಾಟಕ, ಆದಿ ಆಂಧ್ರ ಮತ್ತು ಆದಿ ದ್ರಾವಿಡ ಜಾತಿಗಳ ಮೂಲ ಜಾತಿಗಳನ್ನು ಗುರುತಿಸಿ ಆಯಾ ಪ್ರವರ್ಗಕ್ಕೆ ಸೇರಿಸುವ ಮೂಲಕ ಗೊಂದಲ ಸರಿಪಡಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಮಾಜಿ ಶಾಸಕ ವೀರಭದ್ರಪ್ಪ ಹಾಲಂಬಿ, ಯಮನಪ್ಪ ಮ್ಯಾಗೇರಿ, ಶ್ರೀನಾಥ ಭೈರವಾಡಗಿ, ಭೀಮರಾಯ ಜಿಗಜಿಣಗಿ, ಕಿಟ್ಟು ಆದ್ವಾನಿ, ಸಂಗಮೇಶ ಮಾದರ, ವೆಂಕಟೇಶ ಹೂಹಿಪ್ಪರಗಿ. ದ್ಯಾವಪ್ಪ ಇಂಗಳೇಶ್ವರ, ಅಶೋಕ ನಡುವಿನಮನಿ, ಭೀಮಾಶಂಕರ ವಿಭೂತಿ, ಉಮೇಶಕುಮಾರ ವಿಭೂತಿ, ಲಕ್ಷ$್ಮಣ ವಿಭೂತಿ, ಕೆ.ಎಚ್. ಪರಿಯವರ ಮತ್ತಿತರರಿದ್ದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಶೇ. 1 ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ದಲಿತ ಸಂರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಅಶೋಕ ಕರೆಕಲ್ಲ, ವೀರಭದ್ರಪ್ಪ ಹಾಲಂಬಿ, ಯಮನಪ್ಪ ಮ್ಯಾಗೇರಿ ಮತ್ತಿತರರಿದ್ದಾರೆ.