ಮಕ್ಕಳಿಗೆ ಅವಕಾಶ ನೀಡಿ ಸುಪ್ತ ಪ್ರತಿಬೆ ಹೊರತನ್ನಿ

11 HANUR 4
ಬಂಡಳ್ಳಿ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ವೇಷ ಭೂಷಣವನ್ನು ಧರಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಗುರುಸ್ವಾಮಿ, ದೊಡ್ಡಸಿದ್ದಶೆಟ್ಟಿ, ಕೃಷ್ಣೇಗೌಡ, ಶಿವಮಲ್ಲು ಇತರರು ಇದ್ದರು.
Published on

ಹನೂರು : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಬೆಳೆಸುವುದರ ಜತೆಗೆ ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಬಿಇಒ ಗುರುಲಿಂಗಯ್ಯ ತಿಳಿಸಿದರು.
ತಾಲೂಕಿನ ಬಂಡಳ್ಳಿ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು.
ಚಾಮರಾಜನಗರ ಜಿಲ್ಲೆ ಜಾನಪದ ಕಲೆಗಳ ತವರೂರು. ಇಲ್ಲಿನ ಜನರಲ್ಲಿ ಕಲೆ ಹಾಸು ಹೊಕ್ಕಾಗಿದ್ದು, ಮಕ್ಕಳಲ್ಲೂ ಸಹ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಇದೆ. ಜತೆಗೆ ಪ್ರತಿ ವಿದ್ಯಾರ್ಥಿಯು ತನ್ನದೇಯಾದ ಪ್ರತಿಭೆಯನ್ನು ಹೊಂದಿರುತ್ತದೆ. ಆದರೆ ಅವಕಾಶಗಳು ದೊರಕದ ಪರಿಣಾಮ ಸುಪ್ತವಾಗಿರುತ್ತದೆ. ಆದ್ದರಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ರಾಹಿಸಬೇಕು. ಇನ್ನು ಈ ಭಾಗದಲ್ಲಿ ಪವಾಡ ಪುರುಷ ಶ್ರೀ ಮಲೆಮಹದೇಶ್ವರರು, ಮಂಟೇಸ್ವಾಮಿ ಹಾಗೂ ಸಿದ್ದಪ್ಪಾಜಿ ನೆಲೆಸಿದ್ದು, ಇವರ ಕುರಿತು ರಚನೆಯಾಗಿರುವ ಕಾವ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ಸ್ಥಳೀಯ ಕಲಾ ಪ್ರಕಾರಗಳಾದ ಬೀಸು ಪದ, ತಂಬೂರಿ ಪದ ಹಾಗೂ ಇನ್ನಿತರ ಜಾನಪದ ಕಲೆ ಹಾಗೂ ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಇದರಿಂದ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೋಯ್ಯಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ತಕ್ಷ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಸದಸ್ಯ ಮುನಿಯನಾಯಕ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಸಿಆರ್‌ಪಿ ದೊಡ್ಡಸಿದ್ದಶೆಟ್ಟಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net