

ಬೆಳಗಾವಿ: ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರು ತಮ್ಮ ಕುಟುಂಬದವರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಉತ್ತರ ವಲಯದ ಐಜಿಪಿ ಡಾ.ಚೇತನ್ ಸಿಂಗ್ ರಾಠೋರ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಪೊಲೀಸ್ ಧ್ವಜ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸೇವೆಯಲ್ಲಿರುವ ನಾವೆಲ್ಲ ನಮ್ಮ ಕರ್ತ್ಯವದ ಜತೆಗೆ ಕುಟುಂಬಕ್ಕೆ ಸಮಯ ಮೀಸಲಿಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಪ್ರಯತ್ನಿಸಬೇಕು ಎಂದರು.
ನಿವೃತ್ತ ಪಿಎಸ್‌ಐ ಗಂಗಾಧರ ಹೆಗಡೆ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಭೀಮಾಶಂಕರ ಗುಳೇದ, ನಿವೃತ್ತ ಸಿವಿಲ್ ಹೆಡ್ ಕಾನ್‌ಸ್ಟೆಬಲ್ ಗಾಳೆಪ್ಪ ಹಡಗಿನಾಳ ಇದ್ದರು.
ನಗರ ಪೊಲೀಸ್ ಕಮಿಷನರ್ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಸ್ವಾಗತಿಸಿದರು. ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ ವಂದಿಸಿದರು.