

ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ವಲಯದ ಶಾಲೆಗಳಲ್ಲಿ ಶನಿವಾರ ಆರಂಭೋತ್ಸವ ಸಂಭ್ರಮದಿಂದ ನಡೆಯಿತು. ಕೆಲವು ಶಾಲೆಗಳಲ್ಲಿ ಮಕ್ಕಳನ್ನು ಹೂವು ನೀಡಿ, ಸಿಹಿ ವಿತರಿಸಿ, ಬ್ಯಾಂಡ್ ವಾದನದೊಂದಿಗೆ ಬರವಾಡಿಕೊಳ್ಳಲಾಯಿತು. ಮಳೆಯ ಕಾರಣ ಶುಕ್ರವಾರ ಜಿಲ್ಲೆಯಾದ್ಯಂತ ರಜೆ ನೀಡಿದ್ದರಿಂದ ಪ್ರಾರಂಭೋತ್ಸವ ಇರಲಿಲ್ಲ.
ಕುಂದಾಪುರ ವಲಯ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಅವರು ಕೋಟೇಶ್ವರ ಪಬ್ಲಿಕ್ ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡರು. ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ ಬವಳಾಡಿ ಸರ್ಕಾರಿ ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವದಲ್ಲಿ ಭಾಗವಹಿಸಿದರು.