ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿ

IMG_20230321_111144-...05
Published on

ಚಿತ್ರದುರ್ಗ:  ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೊರಗಿನವರ ಬದಲು ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಕೆಪಿಸಿಸಿ ನಾಯಕರಿಗೆ ತಾಪಂ ಮಾಜಿ ಸದಸ್ಯ ಎಸ್. ತಿಪ್ಪೇಸ್ವಾಮಿ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರಕ್ಕೆ ಹೊಸಬರ ಅಗತ್ಯ ಇದ್ದು, ಅದರಲ್ಲೂ ಸ್ಥಳೀಯರಿಗೆ ಆದ್ಯತೆ ನೀಡಿದರೆ ಮತದಾರರು ಆಶೀರ್ವದಿಸುವ ವಿಶ್ವಾಸವಿದೆ. ಈ ಕಾರಣದಿಂದಾಗಿ ಆದ್ಯತೆ ನೀಡಿ ಎಂದು ಮನವಿ ಮಾಡಿದರು.

ಮುಖಂಡ ವೆಂಕಟೇಶ್ ನಾಯ್ಕ್, ಭೋವಿ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net