ನಿಗಮ ಮಂಡಳಿ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಿ

lathif
Published on

ಮಡಿಕೇರಿ: ಕೊಡಗಿಗೆ ಎಂಎಲ್‌ಸಿ ಅಥವಾ ನಿಗಮ ಮಂಡಳಿ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಬ್ದುಲ್ ಲತೀಫ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


ಕೊಡಗಿನಲ್ಲಿ ಕಳೆದ ೨೦ ವರ್ಷಗಳ ನಂತರ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಅಚ್ಚರಿಯ ಗೆಲುವು ಸಾಧಿಸಿದೆ. ಈ ಬಾರಿ ಕೊಡಗಿನಲ್ಲಿ ಅಲ್ಪಸಂಖ್ಯಾತರ ಮತದಾರರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಂತರ್‌ಗೌಡ ಹಾಗೂ ಎ.ಎಸ್.ಪೊನ್ನಣ್ಣರವರನ್ನು ಗೆಲ್ಲಿಸುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನ ಎರಡೂ ಕ್ಷೇತ್ರಗಳು ಕೂಡ ಕಾಂಗ್ರೆಸ್ ಪಾಲಾಗಿದೆ. ಕೊಡಗಿನಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರ ಮತದಾರರು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.


ಈವರೆಗೆ ಕೊಡಗಿನ ಅಲ್ಪಸಂಖ್ಯಾತರ ನಾಯಕರುಗಳಿಗೆ ಸರ್ಕಾರದಲ್ಲಿ ಯಾವುದೇ ಸೂಕ್ತ ಸ್ಥಾನ ಮಾನಗಳು ಲಭಿಸಿಲ್ಲ. ಹಾಗಾಗಿ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಎರಡು ಶಾಸಕರುಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಕೊಡಗಿನ ಅಲ್ಪಸಂಖ್ಯಾತರ ನಾಯಕರಿಗೆ ಎಂಎಲ್‌ಸಿ ಅಥವಾ ನಿಗಮ ಮಂಡಳಿ ಸ್ಥಾನ ನೀಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net