ನಿಷ್ಠಾವಂತರಿಗೆ ನಿಗಮ-ಮಂಡಳಿ ಅಧಿಕಾರ ಕೊಡಿ

mlc b.k.hariprasad press meet
ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಸರ್ಕಾರಕ್ಕೆ ಆಗ್ರಹಿಸಿದರು.

ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಸಕರು, ಎಂಎಲ್‌ಸಿಗಳು ಸೇರಿ ಅಧಿಕಾರದಲ್ಲಿರುವವರಿಗೆ ನಿಗಮ-ಮಂಡಳಿಗಳನ್ನು ನೀಡಬಾರದು. ಪಕ್ಷ ಅಧಿಕಾರಕ್ಕೆ ಬರಲು ದುಡಿದ ಕಾರ್ಯಕರ್ತರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಧ್ವನಿ ಎತ್ತಬೇಕಿದ್ದು ಕಾರ್ಯಕರ್ತರಿಗೂ ಅಧಿಕಾರ ನೀಡಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net