ರೈತರಿಗೆ ಉಚಿತ ವಿದ್ಯುತ್ ನೀಡಿ

ಕಂಪ್ಲಿ ಜೆಸ್ಕಾಂ ಎಇ ವಿನೋದ್‌ಕುಮಾರ್ ಬ್ಯಾಲಾಳ್‌ಗೆ ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಬಿ.ಗಂಗಾಧರ, ಸಂಘದ ಗೌರವಾಧ್ಯಕ್ಷ ಬಿ.ಹನುಮಂತಪ್ಪ, ಉಪಾಧ್ಯಕ್ಷ ಲಕ್ಷ್ಮೀರೆಡ್ಡಿ, ನಂ.10ಮುದ್ದಾಪುರ ಘಟಕದ ಅಧ್ಯಕ್ಷ ಬಿ.ಶಂಕರ್, ಉಪಾಧ್ಯಕ್ಷ ನೀಲಪ್ಪ ಭೋವಿ ಇತರರಿದ್ದರು.

Published on

ಕಂಪ್ಲಿ: ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸುವ ಪ್ರಯತ್ನ ನಿಲ್ಲಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳು ಜೆಸ್ಕಾಂ ಎಇ ವಿನೋದ್‌ಕುಮಾರ್ ಬ್ಯಾಲಾಳ್‌ಗೆ ಬುಧವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬಿ.ಗಂಗಾಧರ ಮಾತನಾಡಿ, ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಕಾರ್ಡ್ ಹಾಗೂ ಡಿಜಿಟಲ್ ಮೀಟರ್ ಅಳವಡಿಸಲು 10 ಸಾವಿರ ರೂ. ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಲು ನಡೆಸುತ್ತಿರುವ ಪ್ರಯತ್ನ ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ ರೈತರಿಗೆ ವಿದ್ಯುತ್ ಉಪಕರಣಗಳನ್ನು ಒದಗಿಸಿದಂತೆ ಉಚಿತ ವಿದ್ಯುತ್ ನೀಡಬೇಕು. ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಸಂಖ್ಯೆ ಜೋಡಣೆ ಮಾಡುವುದನ್ನು ನಿಲ್ಲಿಸಬೇಕು. ಉದಾಸೀನ ತೋರಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಬಿ.ಗಂಗಾಧರ ಎಚ್ಚರಿಸಿದರು.

ಸಂಘದ ಗೌರವಾಧ್ಯಕ್ಷ ಬಿ.ಹನುಮಂತಪ್ಪ, ಉಪಾಧ್ಯಕ್ಷ ಲಕ್ಷ್ಮೀರೆಡ್ಡಿ, ನಂ.10 ಮುದ್ದಾಪುರ ಘಟಕದ ಅಧ್ಯಕ್ಷ ಬಿ.ಶಂಕರ್, ಉಪಾಧ್ಯಕ್ಷ ನೀಲಪ್ಪ ಬೋವಿ, ರಾಮಸಾಗರ ಘಟಕ ಅಧ್ಯಕ್ಷ ಜೆ.ಮಂಜುನಾಥ, ಪದಾಧಿಕಾರಿಗಳಾದ ಕೆ.ಗೋವಿಂದಪ್ಪ, ಬಿ.ಕುಬೇರಪ್ಪ, ಬಿ.ಶಿವಪ್ಪ, ಯು.ಹುಲುಗಪ್ಪ, ಬಿ.ಶಿವಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net