ಅಲೆಮಾರಿಗಳ ಅಭಿವೃದ್ಧಿಗೆ ಅನುದಾನ ನೀಡಿ

07-02-Shiva-1
ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಾವಿರ ಕೋಟಿ ರೂ. ನೀಡುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಬುಧವಾರ ಮನವಿ ಸಲ್ಲಿಸಲಾಯಿತು. ಮಹಾಸಭಾ ಜಿಲ್ಲಾಧ್ಯಕ್ಷ ರಂಗಮುನಿ, ಪದಾಕಾರಿಗಳಾದ ಹುಸೇನಪ್ಪ, ತಿಮ್ಮಪ್ಪ ಸ್ವಾಮಿ, ಮಲ್ಲಯ್ಯ, ವಿನೋದ, ಸಹ್ಯಾದ್ರಿ, ಭೀಮರಾಯ ಇದ್ದರು.
Published on

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿ ಅಲೆಮಾರಿಗಳು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದು, ನೆಲೆಯಿಲ್ಲದೆ ಸಂಕಷ್ಟದಲ್ಲಿದ್ದು, ಸಮುದಾಯದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸರ್ಕಾರದ ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲ ಅಲೆಮಾರಿಗಳಿಗೆ ನೇರ ಸಾಲ, ಉದ್ಯಮಶೀಲತಾ ಮತ್ತು ಇತರೆ ಸಾಲ ಸೌಲಭ್ಯಗಳನ್ನು ಒದಗಿಸಬೇಕು. ಮನೆ ನಿರ್ಮಾಣ ಮಾಡಿಕೊಳ್ಳಲು 5 ರಿಂದ 6 ಲಕ್ಷ ರೂ. ಸಹಾಯಧನ ನೀಡಬೇಕು. ವಸತಿ ಸೌಲಭ್ಯ ನೀಡಬೇಕು.
ಭೂ ಒಡೆತನ ಯೋಜನೆಯಡಿ ಜಮೀನು ನೀಡಬೇಕು. ಅಲೆಮಾರಿ ಶಾಶ್ವತ ಆಯೋಗ ಘೋಷಿಸಬೇಕು. ಬಜೆಟ್‌ನಲ್ಲಿ ಸಮುದಾಯದ ಅಭಿವೃದ್ಧಿಗೆ ಯೋಜನೆಗಳನ್ನು ಘೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಮಹಾಸಭಾ ಜಿಲ್ಲಾಧ್ಯಕ್ಷ ರಂಗಮುನಿ, ಪದಾಕಾರಿಗಳಾದ ಹುಸೇನಪ್ಪ, ತಿಮ್ಮಪ್ಪ ಸ್ವಾಮಿ, ಮಲ್ಲಯ್ಯ, ವಿನೋದ, ಸಹ್ಯಾದ್ರಿ, ಭೀಮರಾಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net