ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡಿ

ಯಲಬುರ್ಗಾ ತಾಲೂಕಿನ ಬುಡಕುಂಟಿ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೆಕೊಪ್ಪ ಅಂಗನವಾಡಿ ಕೇಂದ್ರ ಉದ್ಘಾಟಿಸಿದರು. ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯಕ್ ಇದ್ದರು.
ಯಲಬುರ್ಗಾ ತಾಲೂಕಿನ ಬುಡಕುಂಟಿ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೆಕೊಪ್ಪ ಅಂಗನವಾಡಿ ಕೇಂದ್ರ ಉದ್ಘಾಟಿಸಿದರು. ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯಕ್ ಇದ್ದರು.
Published on

ಯಲಬುರ್ಗಾ: ಪಾಲಕರು ಮಕ್ಕಳಿಗೆ ಬಾಲ್ಯದಿಂದಲೇ ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಮಕ್ಕಳ ಮೊದಲ ಹಂತದ ಶಿಕ್ಷಣಕ್ಕೆ ಅಂಗನವಾಡಿಗಳು ಪೂರಕ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹೇಳಿದರು.

ತಾಲೂಕಿನ ಬುಡಕುಂಟಿ ಗ್ರಾಮದಲ್ಲಿ ಶುಕ್ರವಾರ 2ನೇ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಿರೀಕ್ಷೆಗೂ ಮೀರಿ ಕೆಲಸ ನಿರ್ವಹಿಸುತ್ತಿದ್ದು, ಕೇಂದ್ರಗಳು ಹೆಚ್ಚು ಕ್ರಿಯಾಶೀಲವಾಗಿವೆ. ಹಾಗೆ ಅಗತ್ಯ ಇರುವಲ್ಲಿ ನೂತನ ಕಟ್ಟಡ ನಿರ್ಮಿಸಿ ಬಳಕೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ಉತ್ತಮ ವಾತಾವರಣದಲ್ಲಿ ಆರೈಕೆ ಸಿಗುವಂತೆ ಮಾಡಲಾಗುತ್ತಿದೆ ಎಂದರು. ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯಕ್, ಕಾರ್ಯಕರ್ತೆರು, ಸಹಾಯಕಿಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net